ಅಗಸ್ಟ್ 21 ರಿಂದ ಸೆ.4 ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಬೇರೆ ಬೇರೆ ದಿವಸಗಳಂದು ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಮದ್ಯಪಾನ ,ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21(1 ) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.
ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ ಬ್ಯಾರಲ್, ಬಕೆಟ್ ಗಳಲ್ಲಿ ವಿಸರ್ಜನೆ ಮಾಡಬೇಕು, ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು, ಭಕ್ತಾದಿಗಳಿಗೆ ಸ್ಯಾನಿಟೈಸರ್,ಮಾಸ್ಕ್ ಧರಿಸಲು ಸೂಚಿಸಬೇಕು, ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು,ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ
ಅಗಷ್ಟ 22 ರಿಂದ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
Reviewed by News10Karnataka Admin
on
August 21, 2020
Rating:
No comments: