ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಪೀರನವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ನೂತನವಾಗಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದರು.
ಇದಕ್ಕೂ ಮುಂಚೆ ಪೀರನವಾಡಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು.
ಅಬಕಾರಿ ಸಚಿವರಾದ ಎಚ್.ನಾಗೇಶ್, ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಪಿರನವಾಡಿ ರಾಯಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಿದ ಸಚಿವ ಈಶ್ವರಪ್ಪ, ರಮೇಶ ಜಾರಕಿಹೊಳಿ...
Reviewed by News10Karnataka Admin
on
August 29, 2020
Rating:

No comments: