ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ ಮಾಡಿದರು.
ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿದ್ದಾರೆ. ಪಕ್ಷದ ಸಂಘಟನೆಯ ಜೊತೆಗೆ ನೀರು ಪೋಲಾಗುವುದನ್ನು ತಡೆಯುವ, ವ್ಯರ್ಥವಾಗಿ ಹರಿಯುವ ನೀರನ್ನು ಸದ್ಬಳಕೆ ಮಾಡುವಂತಹಾ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಕೋರಿದರು.
ಪಕ್ಷ ಮತ್ತು ಸರ್ಕಾರದ ಮಧ್ಯೆ ಇರುವ ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನರ ಸಹಭಾಗಿತ್ವದಲ್ಲಿಯೇ ಪರಿಣಾಮಕಾರಿಯಾಗಿ ಕೆಲಸ ಮಾಡಿ, ಪಕ್ಷದ ಸಂಘಟನೆಯ ಚಟುವಟಿಕೆಗಳನ್ನು ವಿಸ್ತರಿಸಿ ಎಂದು ಭೇಟಿಯ ವೇಳೆ, ಶ್ರೀ ಜೆ ಪಿ ನಡ್ಡಾ ಅವರು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸೂಚಿಸಿದರು.
ಸಾಹುಕಾರ ರಮೇಶ ಜಾರಕಿಹೊಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಬೇಡಿಕ್ಕೊಂಡಿದ್ದೆನು..?
Reviewed by News10Karnataka Admin
on
August 17, 2020
Rating:

No comments: