.

ಬಂಡೆಯನ್ನ ಬಂಧಿಸ್ತಾರಾ..? ಸಿಬಿಐ..?


ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಿಬಿಐ ಡಿಕೆ ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ಇಂದು ಮುಂಜಾನೆಯಿಂದ ಡಿ.ಕೆ ಶಿವಕುಮಾರ್ ಅವರ ಬೆಂಗಳೂರು, ಕನಕಪುರ ನಿವಾಸ, ದೆಹಲಿ, ಮುಂಬೈ ಸೇರಿದಂತೆ ಡಿಕೆಶಿಗೆ ಸೇರಿದ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ದೆಹಲಿ, ಮುಂಬೈ ಹಾಗೂ ಬೆಂಗಳೂರು ನಿವಾಸಗಳಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿದೆ ಎನ್ನಲಾಗಿದೆ.

ಈ ನಡುವೆ ಬೆಂಗಳೂರು ಸಿಬಿಐ ಘಟಕ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಿರುವ ಸಾಧ್ಯತೆಯಿದೆ..
ಬಂಡೆಯನ್ನ ಬಂಧಿಸ್ತಾರಾ..? ಸಿಬಿಐ..? ಬಂಡೆಯನ್ನ ಬಂಧಿಸ್ತಾರಾ..? ಸಿಬಿಐ..? Reviewed by News10Karnataka Admin on October 04, 2020 Rating: 5

No comments:

Powered by Blogger.