ಧಾರವಾಡ : ಸರ್ಕಾರದ ಆದೇಶದಂತೆ ಬರುವ ಜನೆವರಿ 1 ರಿಂದ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುವುದು, ಆದರೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಸಂಜೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ರಾಜ್ಯದಾದ್ಯಂತ ಜನೆವರಿ 1 ರಿಂದ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆ ಮತ್ತು ಕಾಲೇಜುಗಳನ್ನು ಪುನಾರಂಭಿಸಲು ನಿರ್ಧರಿಸಲಾಗಿರುವುದರಿಂದ ನಮ್ಮ ಧಾರವಾಡ ಜಿಲ್ಲೆಯಲ್ಲಿ ಕೂಡ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲಾ ,ಆಸಕ್ತ ವಿದ್ಯಾರ್ಥಿಗಳು ಅವರ ಪಾಲಕರಿಂದ" ನಮ್ಮ ಮಕ್ಕಳು ತರಗತಿಗೆ ಹಾಜರಾಗಲು ಅಭ್ಯಂತರವಿಲ್ಲ" ಎಂಬ ಅನುಮತಿ ಪತ್ರದೊಂದಿಗೆ ತರಗತಿಗಳಿಗೆ ಹಾಜರಾಗಬಹುದಾಗಿರುತ್ತದೆ. ಕೇವಲ ಮೂರು ಅವಧಿಗಳನ್ನು ತೆಗೆದುಕೊಳ್ಳುವ ಮೂಲಕ ಅರ್ಧ ದಿನದ ಶಾಲೆಯನ್ನು ನಡೆಸಲಾಗುವುದು. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಇರುವುದಿಲ್ಲಾ. ಇಚ್ಛೆಯುಳ್ಳ ವಿದ್ಯಾರ್ಥಿಗಳು ತಾವೇ ಊಟ ತರಬಹುದಾಗಿರುತ್ತದೆ. ರೇಷನ್ ನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು.
ಈ ಸಂದರ್ಭದಲ್ಲಿ ಡಿ.ಡಿ.ಪಿ.ಐ ಮೋಹನಕುಮಾರ್ ಹಂಚಾಟೆ ಮತ್ತು ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಜನೇವರಿ 1 ರಿಂದ ಎಸ್ ಎಸ್ ಎಲ್ ಸಿ ಪಿಯು ತರಗತಿಗಳು ಆರಂಭ ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಢಾ.ಬಿ ಸುಶಿಲಾ ಹೇಳಿಕೆ..
Reviewed by News10Karnataka Admin
on
December 24, 2020
Rating:

No comments: