.

ಗೋಕಾಕನ ಯಾರಾದರೊಬ್ಬರು ಹಿಂದೆ ಸರಿದರೆ ಚಿಕ್ಕೋಡಿ, ಇಲ್ಲ ಗೋಕಾಕ ಜಿಲ್ಲೆ ಆಗುತ್ತೆ...ಸಚಿವ ರಮೇಶ ಜಾರಕಿಹೊಳಿ ಹೇಳಿಕೆ...ಚಿಕ್ಕೋಡಿ : ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ ಅವ್ರು, ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆಯನ್ನು ಮಾಡಿ ಚಿಕ್ಕೋಡಿ ಗೋಕಾಕ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. 
ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನಾಗಿ ಮಾಡಲು ನಿರ್ಧರಿಸಿದರು. ತಾಂತ್ರಿಕ ಕಾರಣದಿಂದ ಕೈಬಿಡಲಾಯಿತು. ಚಿಕ್ಕೋಡಿ ಅಥವಾ ಗೋಕಾಕ ಪ್ರತ್ಯೇಕ ಜಿಲ್ಲೆಯ ಬಗ್ಗೆ ಇವತ್ತು ಸಿ ಎಂ ಬಿಎಸ್ವೈ ಅವರಿಗೆ ಮನವಿಯನ್ನು ಮಾಡುವೆ ಹಾಗೂ ಚಿಕ್ಕೋಡಿ, ಗೋಕಾಕ ತಾಲೂಕಿನಲ್ಲಿ ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕವನ್ನು ಸಲೀಸಾಗಿ ಜಿಲ್ಲೆ ಮಾಡಬಹುದು ಎಂದು ಸ್ಪಷ್ಟ ಪಡಿಸಿದ್ದಾರೆ.ಬಿ ಆರ್ ಸಂಗಪ್ಪಗೋಳ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಗೋಕಾಕನ ಯಾರಾದರೊಬ್ಬರು ಹಿಂದೆ ಸರಿದರೆ ಚಿಕ್ಕೋಡಿ, ಇಲ್ಲ ಗೋಕಾಕ ಜಿಲ್ಲೆ ಆಗುತ್ತೆ...ಸಚಿವ ರಮೇಶ ಜಾರಕಿಹೊಳಿ ಹೇಳಿಕೆ... ಗೋಕಾಕನ ಯಾರಾದರೊಬ್ಬರು ಹಿಂದೆ ಸರಿದರೆ ಚಿಕ್ಕೋಡಿ, ಇಲ್ಲ ಗೋಕಾಕ ಜಿಲ್ಲೆ ಆಗುತ್ತೆ...ಸಚಿವ ರಮೇಶ ಜಾರಕಿಹೊಳಿ ಹೇಳಿಕೆ... Reviewed by News10Karnataka Admin on December 04, 2020 Rating: 5

No comments:

Powered by Blogger.