.

ಜನೇವರಿ 26 ಕ್ಕೆ ಗಣರಾಜ್ಯೋತ್ಸವವನ್ನ ವಿಜೃಂಬಣೆಯಿಂದ ಆಚರಣೆ ಮಾಡಲಾಗುವುದು, ಜಿಲ್ಲಾಧಿಕಾರಿ‌ ನಿತೇಶ ಪಾಟೀಲ ಹೇಳಿಕೆ...

ಜ. 26 ರಂದು ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ

ಧಾರವಾಡ (ಕರ್ನಾಟಕ ವಾರ್ತೆ) ಜ.02: ಜನವರಿ 26 ರಂದು ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮ ಆಯೋಜನೆಗೆ ವಿವಿಧ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಗಣರಾಜ್ಯೋತ್ಸವದ ನಿಮಿತ್ಯ ಜನೇವರಿ 25 ರಿಂದ 27 ರ ವರೆಗೆ ನಗರದ ಎಲ್ಲ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಜ.26 ರಂದು ಬೆಳಿಗ್ಗೆ 7-30 ಕ್ಕೆ ಎಲ್ಲ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8-30 ಕ್ಕೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ  ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಸಮಾವೇಶಗೊಳ್ಳಬೇಕು. ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸುವರು. ಪೊಲೀಸ್ ಹಾಗೂ ವಿವಿಧ ದಳಗಳ ಸದಸ್ಯರು ಪಥ ಸಂಚಲನ ನಡೆಸಿ, ಗೌರವ ಸಲ್ಲಿಸುವರು.ಕೋವಿಡ್ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಂದ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಿಲ್ಲ, ಆದರೇ 10 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶಿಸಲು ಇಚ್ಚಿಸಿದಲ್ಲಿ ಪರಿಶೀಲಿಸಿ, ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 
 
ಕಾನೂನು ಸುವ್ಯವಸ್ಥೆ ವಿಭಾಗದ ಉಪಪೊಲೀಸ್ ಆಯುಕ್ತರ ಅಧ್ಯಕ್ಷತೆಯ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ, ಶಿಫಾರಸ್ಸು ಮಾಡುವ ಜಿಲ್ಲೆಯ ಐವರು ಸಾಧಕರಿಗೆ  ಇದೇ ಸಂದರ್ಭದಲ್ಲಿ ಸನ್ಮಾನ ಮಾಡಲಾಗುವುದು. ಮತ್ತು ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.

ಗಣರಾಜ್ಯೋತ್ಸವ ದಿನದಂದು ಜಿಲ್ಲೆಯ ಜನತೆಗೆ ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವರು ನೀಡುವ ಸಾರ್ವಜನಿಕ ಸಂದೇಶದ ಭಾಷಣಕ್ಕೆ ಎಲ್ಲ ಇಲಾಖೆಗಳ ಸಾಧನೆಗಳ ಕುರಿತು ಸಂಕ್ಷೀಪ್ತ ವಿವರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಇ-ಮೇಲ್ varthabhavandwd74@gmail.com ಗೆ ಜನೇವರಿ 13, 2021 ರೊಳಗಾಗಿ ಕಳುಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು. 

ಹುಬ್ಬಳ್ಳಿ-ಧಾರವಾಡ ಮಹಾನಗರ ಅಪರಾಧ ಮತ್ತು ಸಂಚಾರಿ ವಿಭಾಗದ  ಉಪಪೊಲೀಸ್ ಆಯುಕ್ತ  ಆರ್.ಬಿ .ಬಸರಗಿ ವೇದಿಕೆಯಲ್ಲಿದ್ದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸ್ವಾಗತಿಸಿ, ಕಾರ್ಯಕ್ರಮಗಳ ಆಯೋಜನೆ ಹಾಗೂ ಇಲಾಖೆಗಳ ಜವಾಬ್ದಾರಿ ಕುರಿತು ವಿವರಿಸಿದರು. 

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ., ಡಿಎಆರ್ ಡಿವೈಎಸ್‍ಪಿ ರಾಮನಗೌಡ ಹಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ಯಶವಂತ ಮದೀನಕರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಚೌಡಣ್ಣವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್, ತಹಶೀಲ್ದಾರರಾದ ಸಂತೋಷ ಬಿರಾದಾರ, ಪ್ರಕಾಶ ನಾಶಿ, ಅಶೋಕ ಶಿಗ್ಗಾಂವಿ, ನವೀನ ಹುಲ್ಲೂರ, ಅಮರೇಶ ಪಮ್ಮಾರ, ಕೊಟ್ರೇಶ್ ಗಾಳಿ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಜನೇವರಿ 26 ಕ್ಕೆ ಗಣರಾಜ್ಯೋತ್ಸವವನ್ನ ವಿಜೃಂಬಣೆಯಿಂದ ಆಚರಣೆ ಮಾಡಲಾಗುವುದು, ಜಿಲ್ಲಾಧಿಕಾರಿ‌ ನಿತೇಶ ಪಾಟೀಲ ಹೇಳಿಕೆ... ಜನೇವರಿ 26 ಕ್ಕೆ ಗಣರಾಜ್ಯೋತ್ಸವವನ್ನ ವಿಜೃಂಬಣೆಯಿಂದ ಆಚರಣೆ ಮಾಡಲಾಗುವುದು, ಜಿಲ್ಲಾಧಿಕಾರಿ‌ ನಿತೇಶ ಪಾಟೀಲ ಹೇಳಿಕೆ... Reviewed by News10Karnataka Admin on January 02, 2021 Rating: 5

No comments:

Powered by Blogger.